ಬೆಂಗಳೂರು: ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ನ್ಯಾಯಾಲಯದ ಆದೇಶ ಮೀರಿ ಕಸ ಸುರಿಯುತ್ತಿರುವ ಬಿಬಿಎಂಪಿ ಅಧಿಕಾರಿಗಳ ಮೇಲೆ ಹೈಕೋರ್ಟ್ ಗರಂ ಆಗಿದೆ. ಕೋರ್ಟ್ ನಿರ್ಬಂಧ ಆದೇಶ ಇದ್ದರೂ ಕಸ ಸುರಿಯುತ್ತಿರುವ ಅಧಿಕಾರಿಗಳು ಜೈಲಿಗೆ ಹೋಗಲು ಸಿದ್ಧರಾಗಿ ಎಂದು ಆಕ್ರೋಶಗೊಂಡಿರುವ ಹೈಕೋರ್ಟ್ ಮಾ.5ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ತಾಕೀತು ಮಾಡಿದೆ.
ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮಪರ್ಕವಾಗಿ ವಿಲೇವಾರಿ ಮಾಡಲು ಬಿಬಿಎಂಪಿ ವಿಫಲವಾಗಿದೆ ಎಂದು ತಿಳಿಸಿ 2012ರಲ್ಲಿ ಸಲ್ಲಿಸಲಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೆಂಡಕಾರಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ಸುರಿಯುವುದರಿಂದ ಬಿಬಿಎಂಪಿಯನ್ನು ನಿರ್ಬಂಧಿಸಿ 2021ರ ಮಾ.6ರಂದು ಹೈಕೋರ್ಟ್ ಆದೇಶಿಸಿತ್ತು. ಇದಾದ ನಂತರವೂ ಮಿಟ್ಟಗಾನಹಳ್ಳಿಯಲ್ಲಿ ಕ್ವಾರಿ ಪ್ರದೇಶಲ್ಲಿ ಕಸ ಸುರಿಯಲಾಗಿದೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ಇದರಿಂದ ಆಕ್ರೋಶಗೊಂಡ ನ್ಯಾಯಾಲಯ ಜೈಲಿಗೆ ಹೋಗಲು ಬ್ಯಾಗು ಹಾಗು ಅಗತ್ಯ ವಸ್ತುಗಳೊಂದಿಗೆ ಸಿದ್ಧರಾಗಿ ಬರುವಂತೆ ನಿಮ್ಮ ಅಧಿಕಾರಿಗಳಿಗೆ ತಿಳಿಸಿ. ಅಧಿಕಾರಿಗಳನ್ನು ಈ ಬಾರಿ ಖಂಡಿತವಾಗಿ ನ್ಯಾಯಾಲಯದ ಅಂಗಳದಿಂದಲೇ ಜೈಲಿಗೆ ಕಳುಹಿಸಲಾಗುವುದು. ಹೈಕೋರ್ಟ್ ಏನೆಂಬುದನ್ನು ಅಧಿಕಾರಿಗಳಿಗೆ ಪಾಠ ಕಲಿಸಬೇಕು. ಕೋರ್ಟ್ ಆದೇಶ ಉಲ್ಲಂಘಿಸಿದರೆ ಏನಾಗುತ್ತದೆ ಎಂಬುದನ್ನು ಅವರಿಗೆ ಅರಿವಾಗಬೇಕು ಎಂದು ಕಟುವಾಗಿ ನುಡಿದಿದೆ.
PublicNext
16/02/2022 08:49 am