ಶಿವಮೊಗ್ಗ: ಹಿಂದೂ ಯುವಕ ಹರ್ಷನ ಹತ್ಯೆ ಕೇಸ್ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ನ್ನು ಇನ್ನೂ ಎರಡು ದಿನ ಮುಂದುವರಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಹೇಳಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಮುಂದೆ ಸೂಕ್ತ ತೀರ್ಮಾನ ಮಾಡುತ್ತೇವೆ ಅಗತ್ಯವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ ನೀಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
PublicNext
22/02/2022 08:43 pm