ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂಗಳಿಗೂ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬಹುದು : ಕೇಂದ್ರದಿಂದ ಸುಪ್ರೀಂ ಗೆ ಮಾಹಿತಿ

ಹೊಸದಿಲ್ಲಿ: ಕೇಂದ್ರ ಸರಕಾರವು ಆರು ಸಮುದಾಯಗಳಾದ ಕ್ರಿಶ್ಚಿಯನ್, ಸಿಖ್, ಮುಸ್ಲಿಂ, ಬೌದ್ಧ, ಪಾರ್ಸಿ ಹಾಗೂ ಜೈನರನ್ನು ರಾಷ್ಟ್ರೀಯ ಮಟ್ಟದಲ್ಲಿ ಅಲ್ಪಸಂಖ್ಯಾತರೆಂದು ಅಧಿಸೂಚನೆ ಹೊರಡಿಸಿದೆ. ಅದೇ ರೀತಿ ಹಿಂದೂಗಳಿಗೂ ಅಲ್ಪಸಂಖ್ಯಾತ ಸ್ಥಾನಮಾನ ನೀಡಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಗೆ ತಿಳಿಸಿದೆ.

ಹೌದು ಯಾವ ರಾಜ್ಯಗಳಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇದಿಯೂ ಆ ರಾಜ್ಯದ ಸರ್ಕಾರ ಅಲ್ಲಿರುವ ಹಿಂದೂಗಳನ್ನು ಅಲ್ಪಸಂಖ್ಯಾಂತರು ಎಂದು ಘೋಷಿಸಬಹುದು. ಇದು ಕಾರ್ಯರೂಪಕ್ಕೆ ಬಂದರೆ ಅಂತಹ ರಾಜ್ಯಗಳಲ್ಲಿ ಹಿಂದೂಗಳು ತಮ್ಮ ಅಲ್ಪ ಸಂಖ್ಯಾತ ಸಂಸ್ಥೆಗಳನ್ನು ಸ್ಥಾಪಿಸಬಹುದು ಎಂದು ಸರ್ಕಾರ ಹೇಳಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರೆಂದು ಸೂಚಿಸಲು ಮುಕ್ತವಾಗಿವೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.

Edited By : Nirmala Aralikatti
PublicNext

PublicNext

28/03/2022 08:20 pm

Cinque Terre

38.91 K

Cinque Terre

12

ಸಂಬಂಧಿತ ಸುದ್ದಿ