ಬೆಂಗಳೂರು: 2021ನೇ ಸಾಲಿನ ಮುಖ್ಯಮಂತ್ರಿ ಪದಕದ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ರಾಜ್ಯದ 135 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಪದಕ ಪ್ರಕಟವಾಗಿದ್ದು,ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರೋ ಡಿವೈಎಸ್ ಪಿ, ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗೆ ಪದಕ ಲಭಿಸಿದೆ.
ಕರ್ತವ್ಯದಲ್ಲಿ ಉತ್ತಮ ಸಾಧನೆ ತೋರಿದ ಅಧಿಕಾರಿ ಸಿಬ್ಬಂದಿ ಗೆ ಈ ಅತ್ಯತ್ತಮ ಪದಕವನ್ನು ನೀಡಲಾಗಾಗುತ್ತದೆ. ಸಿಐಡಿ ಡಿವೈಎಸ್ ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್ಪೆಕ್ಟರ್ ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್, ಪಿಎಸ್ ಐ ಗಳಾದ ರಾಜಶೇಖರಯ್ಯ, ಭಗವಂತರಾಯ್ ಪಾಟೀಲ್ ,ಪಿಸಿ ಹನುಮೇಶ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪ್ರಕಟವಾಗಿದ್ದು ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್‌ಪಿ ಗ್ರೌಂಡ್‌ನಲ್ಲಿ ಪದಕ ಪ್ರದಾನ ಕಾರ್ಯಕ್ರಮ ನಡೆಯಲಿದೆ.
PublicNext
30/03/2022 09:58 pm