ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಿಂದಾಗಿ ಇಲಾಖೆಯೊಳಗಿನ ಮುಂಬಡ್ತಿ ಪ್ರಕ್ರಿಯೆ ವಿಳಂಬವನ್ನು ತಡೆಯಲು ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.
ಸಿಐಡಿಯಿಂದ ನಡೆಯುತ್ತಿರುವ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಇನ್ನೂ ಸ್ವಲ್ಪ ದಿನಗಳ ಕಾಲ ಮುಂದುವರೆಯಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ವಿಳಂಬವಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನ ಶೀಘ್ರವಾಗಿ ಪೂರ್ಣಗೊಳಿಸಲು ಡಿಜಿ ಆದೇಶ ಹೊರಡಿಸಿದ್ದಾರೆ. ರಾಜ್ಯದ ಆಯಾ ಜಿಲ್ಲೆ, ಕಮಿಷನರೇಟ್ ಮತ್ತು ವಲಯ ವ್ಯಾಪ್ತಿಯಲ್ಲಿ ಸದ್ಯ ಮುಂಬಡ್ತಿಗೆ ಅರ್ಹರಿರುವ ಪೊಲೀಸ್ ಸಿಬ್ಬಂದಿಯ ಮಾಹಿತಿಯನ್ನು ಪೊಲೀಸ್ ಪ್ರಧಾನ ಕಚೇರಿಗೆ ಸಲ್ಲಿಸುವಂತೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.
PublicNext
07/05/2022 09:53 pm