ಬೆಂಗಳೂರು : ಇನ್ಮುಂದೆ ಸರ್ಕಾರಿ ವ್ಯಕ್ತಿಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಅನಧಿಕೃತವಾಗಿ ವಿಡಿಯೋ ಫೋಟೋ ತೆಗೆಯಬಾರದು ಎಂದು ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಪ್ರಮೇಯಗಳು ಹೆಚ್ಚಾಗುತ್ತಿವೆ. ಇಂತಹ ಘಟನೆಗಳಿಂದ ಮಹಿಳಾ ನೌಕರರು ಸೇರಿದಂತೆ ಸರ್ಕಾರಿ ನೌಕರರಿಗೆ ತೀರಾ ತೊಂದರೆಯಾಗುತ್ತಿದೆ. ಹಾಗಾಗಿ ವಿಡಿಯೋ ಫೋಟೋ ತೆಗೆಯಲು ಅನುಮತಿ ನೀಡಬಾರದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದ್ದರಿಂದ ರಾಜ್ಯ ಸರ್ಕಾರವು ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಹಾಗೂ ವೀಡಿಯೋ ತೆಗೆಯುವುದನ್ನು ನಿಷೇಧಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.
PublicNext
15/07/2022 03:16 pm