ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಮಾಡುವುದಕ್ಕೆ ನಿರ್ಬಂಧ ವಿಧಿಸಿ ಇಂದು ಮಧ್ಯಾಹ್ನ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಆದೇಶ ಹಿಂಪಡೆಯುವಂತೆ ಒತ್ತಾಯ ಹೆಚ್ಚಿದೆ. ಹೌದು ಈ ಆದೇಶ ಹೊರಬೀಳುತ್ತಿದ್ದಂತೆ ಸಾರ್ವಜನಿಕರು ಒಂದೇ ಸಮನೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಈ ವಿಷಯದಲ್ಲಿ ಸರ್ಕಾರದ ನಿಲುವಿನ ಕುರಿತು ಅಸಮಾಧಾನ ಕೊರಹಾಕಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಗಾಗಿ ಆದೇಶಗಳನ್ನು ಜಾರಿ ಮಾಡುತ್ತಿದ್ದ ಸರ್ಕಾರ ಈಗ ನೌಕರರ ಹಿತಾಸಕ್ತಿಗಾಗಿ ಆದೇಶ ಜಾರಿ ಮಾಡುತ್ತಿದೆ ಎಂದೂ ಟೀಕಿಸಿದ್ದಾರೆ.
ಸರ್ಕಾರದ ಈ ಆದೇಶ ಭ್ರಷ್ಟಾಚಾರಕ್ಕೇ ಕುಮ್ಮಕ್ಕು ಕೊಟ್ಟಂತಿದೆ. ಈ ವಿಷಯದಲ್ಲಿ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗುತ್ತಿದ್ದು, ಆಡಳಿತಾರೂಢ ಬಿಜೆಪಿಯನ್ನು ಬೆಂಬಲಿಸುವವರೂ ಈ ಆದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಈ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.
PublicNext
15/07/2022 08:21 pm