ಬೆಂಗಳೂರು: ಸಿದ್ದರಾಮಯ್ಯ ಸರಕಾರ ಜಾರಿ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಎಸಿಬಿಯನ್ನು ರಚಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಅರ್ಜಿ ಸಲ್ಲಿಸಲಾಗಿತ್ತು.
ಇಂದು (ಗುರುವಾರ) ಹೈಕೋರ್ಟ್, ಎಸಿಬಿ ರಚನೆಯನ್ನು ರದ್ದುಪಡಿಸಿದೆ. ಇದರಿಂದ ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ.ಎಸ್ ಹೇಮಲೇಖಾ ಅವರ ನ್ಯಾಯಪೀಠ, ಎಸಿಬಿಯನ್ನು ರದ್ದುಪಡಿಸಿದ್ದು, ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂದು ಹೇಳಿ ಲೋಕಾಯುಕ್ತ ಬಲವರ್ಧನೆಗೆ ಆದೇಶ ಹೊರಡಿಸಿದೆ.
ಎಸಿಬಿಯನ್ನು ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಲು ತಿಳಿಸಿದ್ದು. ಎಸಿಬಿಯ ಎಲ್ಲ ಕೇಸ್ ಲೋಕಾಯುಕ್ತಕ್ಕೆ ನೀಡಲು ನ್ಯಾ. ಬಿ. ವೀರಪ್ಪ ನೇತೃತ್ವದಲ್ಲಿ ವಿಭಾಗೀಯ ಪೀಠ,ಮಹತ್ವದ ಆದೇಶಿಸಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು. ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
2016ರ ಮಾ.14ರಂದು ಕಾಂಗ್ರೆಸ್ನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಸಿಬಿ ರಚಿಸಿ ಆದೇಶ ಹೊರಡಿಸಿತ್ತು. ಎಸಿಬಿ ರಚನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೋರ್ಟ್ಗೆ ಸಲ್ಲಿಕೆಯಾಗಿದ್ದವು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಅಪರಾಧ ದಾಖಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿದ್ದ ಅಧಿಸೂಚನೆಯನ್ನು 2016ರ ಮಾ.19ರಂದು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಿದ ಹೈಕೋರ್ಟ್, ಎಸಿಬಿ ರಚನೆಯಲ್ಲೇ ರದ್ದು ಮಾಡಿದೆ.
PublicNext
11/08/2022 03:59 pm