ನವದೆಹಲಿ : ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, ಹಿಜಾಬ್ ಕುರಿತು ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಸುಪ್ರೀಂಕೋರ್ಟ್ ನಲ್ಲಿ ಇಂದು ಹಿಜಾಬ್ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯಪೀಠ ಹಿಜಾಬ್ ಕುರಿತ ತೀರ್ಪನ್ನು ಕಾಯ್ದಿರಿಸಿದೆ.
ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.
PublicNext
22/09/2022 02:15 pm