ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಸಂಘಟನೆಗಳನ್ನು ‘ಕಾನೂನು ಬಾಹಿರ’ ಎಂದು ಘೋಷಿಸಿದೆ.
ಪಿಎಫ್ಐ ಬ್ಯಾನ್ ಮಾಡುವಂತೆ ಹಲವು ರಾಜ್ಯಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಕಳೆದ ಸೆ.22ರಂದು ಪಿಎಫ್ಐ ಮೇಲೆ ತನಿಖಾ ಸಂಸ್ಥೆಗಳು ನಡೆಸಿದ ದಾಳಿಯ ಬಳಿಕ ಬಂದ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಬ್ಯಾನ್ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದೆ.
ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಅಡಿಯಲ್ಲಿ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಿದೆ.
PublicNext
28/09/2022 07:04 am