ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಂಕಿತಾ ಭಂಡಾರಿ ಕುಟುಂಬಕ್ಕೆ 25 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ.
ಸಂತ್ರಸ್ತೆಯ ಕುಟುಂಬಕ್ಕೆ ತ್ವರಿತ ನ್ಯಾಯ ಸಿಗುವಂತೆ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಗೌರವಾನ್ವಿತ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ ಎಂದು ಸಿಎಂ ಕಚೇರಿ ಟ್ವೀಟ್ ಮಾಡಿದೆ. ಉತ್ತರಾಖಂಡ ಬಿಜೆಪಿಯ ಉಚ್ಛಾಟಿತ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಎಂಬಾತ 19 ವರ್ಷದ ಅಂಕಿತ ಭಂಡಾರಿಯನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದೆ.
ಯುವತಿಯನ್ನು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನಗಳನ್ನು ವಿರೋಧಿಸಿದ ನಂತರ ಹೋಟೆಲ್ ಮಾಲೀಕ, ಬಿಜೆಪಿ ನಾಯಕನ ಮಗ ಪುಲ್ಕಿತ್ ಆರ್ಯ ಮತ್ತು ಇತರ ಇಬ್ಬರು ಸೇರಿ ಹತ್ಯೆ ಮಾಡಿದ್ದಾರೆ. ಆರಂಭದಲ್ಲಿ ಆಕೆ ಕಾಣೆಯಾಗಿದ್ದಳು ಎನ್ನಲಾಗಿತ್ತು. ನಂತರ ಆಕೆಯ ದೇಹವನ್ನು ಸೆಪ್ಟೆಂಬರ್ 24 ರಂದು ಕಾಲುವೆಯಿಂದ ವಶಪಡಿಸಿಕೊಳ್ಳಲಾಯಿತು.
PublicNext
28/09/2022 01:13 pm