ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಹಿಜಾಬ್ ವಿವಾದ'; ನಾಳೆ ಬೆಳಗ್ಗೆ 10:30ಕ್ಕೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ

ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾಗುವ ಮೊದಲು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ನ್ಯಾಯಪೀಠದ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16. ರಂದು ನಿವೃತ್ತರಾಗಲಿರುವುದರಿಂದ ಈ ಅರ್ಜಿಗಳ ಬಗ್ಗೆ ನಾಳೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

Edited By : Abhishek Kamoji
PublicNext

PublicNext

12/10/2022 07:54 pm

Cinque Terre

59.86 K

Cinque Terre

25

ಸಂಬಂಧಿತ ಸುದ್ದಿ