ಬೆಳಗಾವಿ: ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಶ್ರೀರಾಮಸೇನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ನೇತೃತ್ವದಲ್ಲಿ ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶ್ರೀರಾಮಸೇನೆ ಮತ್ತು ಹಿಂದೂ ರಾಷ್ಟ್ರಸೇನೆ ಸಂಘಟನೆ ಪದಾಧಿಕಾರಿಗಳು ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳನ್ನು ನಿಷೇಧಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ರವಿ ಕೋಕಿತ್ಕರ್ ಎಸ್‍ಡಿಪಿಐ, ಪಿಎಫ್‍ಐ ಮುಸ್ಲಿಂ ಸಂಘಟನೆಗಳು ದೇಶದ್ರೋಹಿ ಚಟುವಟಿಕೆಗಳನ್ನು ಮಾಡುತ್ತಿವೆ. ರಾಜ್ಯದಲ್ಲಿ ಆಗುತ್ತಿರುವ ಹತ್ಯೆಗಳು, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿವೆ. ಹೀಗಾಗಿ ಶೀಘ್ರವೇ ಈ ಎರಡೂ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ಮತ್ತು ಹಿಂದೂ ರಾಷ್ಟ್ರಸೇನೆ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
PublicNext
05/08/2022 02:43 pm