ನವದೆಹಲಿ: ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ಬಂಧಿಸಿರುವುದನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷ 'ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್' ಸೋಮವಾರ ಖಂಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ 'ತೆಹ್ರಿಕ್ ಇ ಇನ್ಸಾಫ್', 'ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಆಡಳಿತಕ್ಕೊಳಪಟ್ಟಿರುವ ಭಾರತವು ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಡಿದಂತೆಯೇ ತನ್ನ ವಿರೋಧಿಗಳ ದನಿ ಅಡಗಿಸುವ ಕೆಲಸದಲ್ಲಿ ನಂಬಿಕೆ ಇಟ್ಟಿದೆ. ಕ್ರಿಕೆಟರ್‌ಗಳನ್ನು ಮತ್ತು ಬಾಲಿವುಡ್ ಸೆಲೆಬ್ರೆಟಿಗಳನ್ನು ತನ್ನ ಪರವಾದ ಅಭಿಪ್ರಾಯ ಸೃಷ್ಟಿಗೆ ಬಳಸಿಕೊಳ್ಳುತ್ತಿದೆ. ಈಗ ಟ್ವಿಟರ್ ಟೂಲ್‌ಕಿಟ್ ಪ್ರಕರಣದಲ್ಲಿ ದಿಶಾ ರವಿ ಅವರನ್ನು ಬಂಧಿಸಿದೆ'' ಎಂದು ಆರೋಪಿಸಿದೆ. ಜೊತೆಗೆ #IndiaHijackTwitter ಎಂಬ ಹ್ಯಾಷ್ ಟ್ಯಾಗ್ ಹಾಕಿದೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ‘ಟೂಲ್‌ಕಿಟ್’ ಅನ್ನು ಸಿದ್ಧಪಡಿಸಿದ ಆರೋಪವನ್ನು ದಿಶಾ ರವಿ ಅವರ ಮೇಲೆ ಹೊರಿಸಲಾಗಿದೆ. ರೈತರ ಪ್ರತಿಭಟನೆಯನ್ನು ಬೆಂಬಲಿಸಲು ತಾನು ಬಯಸಿದ್ದೆ. ಅದಕ್ಕಾಗಿ ಟೂಲ್‌ಕಿಟ್‌ನ ಎರಡು ಸಾಲನ್ನು ತಿದ್ದಿ ಕೊಟ್ಟಿದ್ದೆ ಎಂದು ದಿಶಾ ನ್ಯಾಯಾಧೀಶರಿಗೆ ತಿಳಿಸಿದ್ದಾರೆ.
PublicNext
15/02/2021 06:01 pm