ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾನಿಬಾನ್ ಉಗ್ರರು ಭಯದ ವಾತಾವರಣ ಸೃಷ್ಟಿಸಿದ್ದಾರೆ. ಇದಕ್ಕೆ ವಿಶ್ವದಾದ್ಯಂತ ಟೀಕೆ ವ್ಯಕ್ತವಾಗಿದೆ. ಹೀಗಿದ್ದರೂ ಭಾರತದಲ್ಲಿ ಕೆಲ ತಾನಿಬಾನಿಗಳನ್ನು ಹಾಡಿ ಹೊಗಳಿ ವಿಕೃತಿ ಮೆರೆಯುತ್ತಿದ್ದಾರೆ.
ಸಮಾಜವಾದಿ ಪಕ್ಷದ ಸಂಭಾಲ್ ಸಂಸದ ಶಫಿಕುರ್ ರಹಮಾನ್ ಬರ್ಕ್ ಅವರು ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದನ್ನು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಸಿದ್ದರು. ಈ ಬೆನ್ನಲ್ಲೇ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಮೌಲಾನಾ ಸಜ್ಜದ್ ನೊಮಾನಿ ತಾಲಿಬಾನ್ ಅನ್ನು ಸಿಕ್ಕಾಪಟೆ ಹೊಗಳಿದ್ದಾರೆ. ಅಫ್ಘಾನಿಸ್ತಾನವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತೆಗೆದುಕೊಂಡ ತಾಲಿಬಾನ್ನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ನೀವು ತುಂಬ ಕಠಿಣವಾದಿಗಳಾಗಿದ್ದು, ನಾವು ಹಿಂದಿ ಮುಸ್ಲಿಮರು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ ಎಂದಿದ್ದಾರೆ.
PublicNext
18/08/2021 05:55 pm