ನವದೆಹಲಿ : ಇತ್ತೀಚಿನ ವರ್ಷಗಳಲ್ಲಿ 'ದೇಶದ್ರೋಹ'ದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲಯಲ್ಲಿ ಪೊಲೀಸರು ದೂರುಗಳನ್ನು ದಾಖಲಿಸಲು ಮುಂದಾಗಿದ್ದಾರೆ.
2019ರಲ್ಲಿ ಇಂಥ ಪ್ರಕರಣಗಳ ಸಂಖ್ಯೆಯಲ್ಲಿ ಶೇ 25ರಷ್ಟು ಹೆಚ್ಚಳವಾಗಿದೆ.
ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಆದ್ರೆ ವಿಪರ್ಯಾಸ ನೋಡಿ ದೇಶದ್ರೋಹದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದರೂ, ಆರೋಪ ಸಾಬೀತಾಗಿ, ಶಿಕ್ಷೆಗೆ ಒಳಗಾಗುವವರ ಪ್ರಮಾಣ ತೀರಾ ಕಡಿಮೆ.
ಕಳೆದ ವರ್ಷ ಇಂಥ 30 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಂದು ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಮಾತ್ರ ತನಿಖಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
2015ರಿಂದ 19ರವರೆಗಿನ ಐದು ವರ್ಷಗಳಲ್ಲಿ, ದೇಶದ್ರೋಹದ 283 ಪ್ರಕರಣಗಳು ದಾಖಲಾಗಿದ್ದವು. 56 ಪ್ರಕರಣಗಳ ವಿಚಾರಣೆ ನಡೆದಿದ್ದು, 51 ಪ್ರಕರಣಗಳಿಗೆ ಸಂಬಂಧಿಸಿದಂತೆ 55 ಮಂದಿ ಬಿಡುಗಡೆಯಾಗಿದ್ದಾರೆ.
ಉಳಿದ ಐದು ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿಗೆ ಜೈಲು ಶಿಕ್ಷೆಯಾಗಿದೆ.
ಕರ್ನಾಟಕದಲ್ಲೂ ದೇಶದ್ರೋಹದ ಪ್ರಕರಣ ದಾಖಲು ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.
2018ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದರೆ, ಕಳೆದ ವರ್ಷ ಇಂಥ 22 ಪ್ರಕರಣಗಳು ದಾಖಲಾಗಿವೆ.
ಆನಂತರದ ಸ್ಥಾನದಲ್ಲಿ ಕ್ರಮವಾಗಿ ಅಸ್ಸಾಂ (17), ಜಮ್ಮು ಕಾಶ್ಮೀರ (11) ಹಾಗೂ ಉತ್ತರಪ್ರದೇಶ (10) ಇವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.
ದೇಶದಾದ್ಯಂತ ದಾಖಲಾಗುತ್ತಿರುವ ಇಂಥ ಪ್ರಕರಣಗಳ ಸಂಖ್ಯೆಯಲ್ಲಿ (93 ಪ್ರಕರಣ) ಕಳೆದ ವರ್ಷ ಶೇ 25ರಷ್ಟು ಏರಿಕೆಯಾಗಿದೆ.
PublicNext
05/10/2020 07:25 am