ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಭಾರೀ ಮಳೆ : ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬಿಎಸ್ ವೈ ಮಹತ್ವದ ಸಭೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಮಳೆ ಆರ್ಭಟಕ್ಕೆ ತತ್ತರಿಸಿರುವ ಉತ್ತರ ಕರ್ನಾಟಕದ ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೇಕಾದ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡು ಸಭೆ ನಡೆಸಲಿದ್ದಾರೆ.

Edited By :
PublicNext

PublicNext

16/10/2020 09:50 am

Cinque Terre

76.13 K

Cinque Terre

0

ಸಂಬಂಧಿತ ಸುದ್ದಿ