ಬೆಂಗಳೂರು: ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ತೆಗೆದುಕೊಂಡು ಹೋಗಿದ್ದಕ್ಕೆ ಮಾಜಿ ಸಚಿವ, ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಮೂಲಗಳ ಪ್ರಕಾರ, ಆನಂದ್ ಅಸ್ನೋಟಿಕರ್ ಅವರು ಇಂದು ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣ ಬೆಳೆಸಲು ಮುಂದಾಗಿದ್ದರು. ಈ ವೇಳೆ ಸಿಐಎಸ್ಎಫ್ ಭದ್ರತಾ ಅವರನ್ನು ಪರಿಶೀಲನೆ ಮಾಡಿದಾಗ ಬ್ಯಾಗ್‌ನಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಈ ಹಿನ್ನೆಲೆ ಸಿಐಎಸ್ಎಫ್ ಸಿಬ್ಬಂದಿ ಅಸ್ನೋಟಿಕರ್ ಅವರನ್ನು ವಶಕ್ಕೆ ತೆಗೆದುಕೊಂಡರು ಮತ್ತು ತನಿಖೆ ಕೈಗೊಂಡಿದ್ದಾರೆ. ಮಾಜಿ ಸಚಿವ ಅಸ್ನೋಟಿಕರ್ ಅವರು ತಾನೊಬ್ಬ ಉದ್ಯಮಿಯಾಗಿದ್ದು ಆತ್ಮರಕ್ಷಣೆಗಾಗಿ ಪಿಸ್ತೂಲನ್ನು ಇರಿಸಿಕೊಂಡಿದ್ದಾಗಿ ವಿವರಿಸಿದ್ದಾರೆ ಎನ್ನಲಾಗಿದೆ.
PublicNext
19/09/2020 04:29 pm