ಚಿಕ್ಕೋಡಿಯ ನಾಲ್ಕು ಪ್ರಖ್ಯಾತ ದೇವಸ್ಥಾನಗಳಿಗೆ ಇಂದಿನಿಂದ ಭಕ್ತರ ಪ್ರವೇಶಕ್ಕೆ ಷರತ್ತುಬದ್ಧ ಅನುಮತಿಯನ್ನು ಜಿಲ್ಲಾಡಳಿತ ನೀಡಿದೆ.
ಸವದತ್ತಿಯ ಜೋಗಳಭಾವಿ ಸತ್ಯಮ್ಮದೇವಿ ದೇವಸ್ಥಾನ,ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನ,
ಹುಕ್ಕೇರಿ ತಾಲೂಕಿನ ಬಡಕುಂದ್ರಿ ಹೊಳೆಯಮ್ಮದೇವಿ ದೇವಸ್ಥಾನ, ಕಾಗವಾಡ ತಾಲೂಕಿನ ಮಂಗಸೂಳಿ ಮಲ್ಲಯ್ಯ ದೇವಸ್ಥಾನ ತೆರೆಯಲು ಅನುಮತಿ ನೀಡಲಾಗಿದೆ.
ಆದ್ರೆ ಕಳೆದ 18 ತಿಂಗಳಿಂದ ಬಂದ್ ಆಗಿರುವ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದ್ದು,
ಷರತ್ತುಬದ್ಧ ಅನುಮತಿ ನೀಡಿ ಡಿಸಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.ಜತೆಗೆ
ಜನಸಂದಣಿ ಆಗುವಂತಹ ಉತ್ಸವ, ಜಾತ್ರೆ ಹಾಗೂ ಯಾವುದೇ ಕಾರ್ಯಕ್ರಮ ನಡೆಸದಂತೆ ಕಟ್ಟು ನಿಟ್ಟಿನ ನಿರ್ಬಂಧ ಹೇರಲಾಗಿದೆ
PublicNext
22/09/2021 12:23 pm