ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವಸ್ಥಾನಗಳಲ್ಲಿ ಆನೆ ಬಳಕೆ ಒಂದು ಕ್ರೌರ್ಯ ಎಂದ ಹೈಕೋರ್ಟ್

ಬೆಂಗಳೂರು: ದೇವಸ್ಥಾನಗಳ ಕಾರ್ಯಚಟುವಟಿಕೆ ಹಾಗೂ ಪೂಜೆಗಾಗಿ ಆನೆಗಳನ್ನು ಬಳಕೆ ಮಾಡಿಕೊಳ್ಳುವುದು ಒಂದು ಕ್ರೌರ್ಯ. ಆನೆಗಳು ಕಾಡಿನಲ್ಲಿರಬೇಕು ವಿನಃ ದೇವಸ್ಥಾನದಲ್ಲಿ ಅಲ್ಲ ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬೆಂಗಳೂರು ನಗರದ ತಿಂಡ್ಲುವಿನ ವಿದ್ಯಾರಣ್ಯಪುರದ ಕಾಳಿಕಾದುರ್ಗ ಪರಮೇಶ್ವರಿ ದೇವಸ್ಥಾನದ ಸಂಸ್ಥಾಪಕ ಟ್ರಸ್ಟಿ ರಾಧಮ್ಮ ಮತ್ತು ಪ್ರಧಾನ ಪೂಜಾರಿ ವಸಂತ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಅರ್ಜಿದಾರರ ಪರ ವಾದಿಸಿದ ವಕೀಲ ವಿ.ಶ್ರೀನಿವಾಸ್‌, ಕಾಳಿಕಾದುರ್ಗ ಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಆನೆ ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶನ ನೀಡಬೇಕೆಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿಗಳು ಆನೆಗಳು ಕಾಡಿನಲ್ಲಿರಬೇಕೇ ವಿನಃ ನಾಡಿನಲ್ಲಿ ಅಲ್ಲ. ಕಾಡಿನಲ್ಲಿರಬೇಕಾದ ಪ್ರಾಣಿಯನ್ನು ನಾಡಿನಲ್ಲಿ ಇರಿಸಿದ್ದು ತಪ್ಪು ಎಂದಿದ್ದಾರೆ.

Edited By : Nagaraj Tulugeri
PublicNext

PublicNext

20/08/2021 08:19 am

Cinque Terre

62.02 K

Cinque Terre

7

ಸಂಬಂಧಿತ ಸುದ್ದಿ