ಬೆಂಗಳೂರು: ನಿಗದಿತ ಮಿತಿಗಿಂತ ಅತೀ ಹೆಚ್ಚು ಶಬ್ದ ಹೊರಡಿಸುವ ಘಂಟೆಗಳ ಬಳಕೆಗೆ ಸಂಬಂಧಿಸಿ ಬೆಂಗಳೂರು ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಹೌದು. ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಬ್ರೇಕ್ ಹಾಕಲಾಗಿದೆ. ಈಗ ರಾಜ್ಯ ಸರ್ಕಾರವು ವಿವಿಧ ದೇವಸ್ಥಾನಗಳಲ್ಲಿನ ಘಂಟೆ, ಜಾಗಟೆ, ಧ್ವನಿ ವರ್ಧಕ ಬಳಸದಂತೆ ನಿರ್ಬಂಧ ವಿಧಿಸಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಿದ್ದು, ದೇವಸ್ಥಾನಗಳಲ್ಲಿ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತ ಗಂಟೆ, ಜಾಗಟೆ, ಧ್ವನಿವರ್ಧಕ ಬಳಸದಂತೆ ಸೂಚಿಸಿದೆ.
ಸೂಚನೆಯ ಹೊರತಾಗಿಯೂ ಹೆಚ್ಚಿನ ಶಬ್ದ ಬರುವಂತೆ ಘಂಟೆ ಹೊಡೆದಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಢಮರುಗ, ಧ್ವನಿ ವರ್ಧಕ ಯಂತ್ರಗಳಿಂದ ಧ್ವನಿ ಹೊರಡಿಸಬಾರದು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರದಂತೆ ಶಬ್ದ ಮಾಲಿನ್ಯ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2010, ಪರಿಸರ ಸಂರಕ್ಷಣಾ ಕಾಯ್ದೆ 1986ರ ಅನ್ವಯ ನಿಗದಿತ ಡೆಸಿಬಲ್ ಶಬ್ದ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದ ಮಾಡುವ ಸಂಗೀತ ಸಾಧನಗಳನ್ನು ಬಳಸದಂತೆ ತಿಳಿಸಲಾಗಿದೆ.
PublicNext
15/02/2022 03:31 pm