ಬೆಂಗಳೂರು: ಹಿಜಾಬ್ ವಿವಾದ ಕುರಿತಂತೆ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠವು ಮತ್ತೆ ನಾಳೆ (ಫೆ.16, ಬುಧವಾರ) 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಹಿಜಾಬ್ ವಿವಾದದ ಕುರಿತ ಹೈಕೋರ್ಟ್‌ನಲ್ಲಿ ಇಂದು ವಾದ ಮಂಡಿಸಿದ ಹಿಜಾಬ್ ಅರ್ಜಿ ಪರ ವಕೀಲ ದೇವದತ್ ಕಾಮತ್, ಕಾಲೇಜ್ ಅಭಿವೃದ್ಧಿ ಸಮಿತಿಗೆ ಹಿಜಾಬ್ ನಿರ್ಬಂಧಿಸುವ ಅಧಿಕಾರವಿಲ್ಲ. ಕೇಂದ್ರೀಯ ವಿಶ್ವ ವಿದ್ಯಾಲಯಗಳಲ್ಲಿ ಈಗಲೂ ಹಿಜಾಬ್‌ಗೆ ಅವಕಾಶವಿದೆ ಎಂದು ತಿಳಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ವಿದ್ಯಾರ್ಥಿನಿಯರ ಪರ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದು, ಇನ್ನಷ್ಟು ಸಾಂವಿಧಾನಿಕ ಅಂಶಗಳ ಅಧ್ಯಯನ ಇರುವ ಕಾರಣ ನಾಳೆಗೆ ವಿಚಾರಣೆಯನ್ನು ಮುಂದೂಡಲಾಯಿತು.
PublicNext
15/02/2022 04:56 pm