ಲಕ್ನೋ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಪ್ರಕರಣದ ಕುರಿತು ಇಂದು ವಾರಣಾಸಿಯ ಜಿಲ್ಲಾ ಕೋಟ್ರ್ನಲ್ಲಿ ವಿಚಾರಣೆ ನಡೆಯಲಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಇಂದು ಶೃಂಗಾರ್ ಗೌರಿ-ಜ್ಞಾನವಾಪಿ ಮಸೀದಿ ಮೊಕದ್ದಮೆಯ ವಿಚಾರಣೆ ನಡೆಸಲಿದ್ದಾರೆ.
ಉತ್ತರ ಪ್ರದೇಶದ ನ್ಯಾಯಾಂಗ ಸೇವೆಗಳ ಹಿರಿಯ ಮತ್ತು ಅನುಭವಿ ನ್ಯಾಯಾಂಗ ಅಧಿಕಾರಿಗಳು ಪ್ರಕರಣದ ವಿಚಾರಣೆ ನಡೆಸುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ ಮೇ 21ರಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಮೊಕದ್ದಮೆಯನ್ನು ವರ್ಗಾಯಿಸಲಾಗಿತ್ತು. ಜ್ಞಾನವ್ಯಾಪಿ ಮಸೀದಿಯ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್ ಗೌರಿ. ಗಣೇಶ, ಹನುಮಾನ್ ಮತ್ತು ನಂದಿ ದೇವರ ದೈನಂದಿನ ಪೂಜೆ ಮತ್ತು ಆಚರಣೆಗಳಿಗೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿಯೊಂದಿಗೆ ಪ್ರಸ್ತುತ ಕಾನೂನು ಹೋರಾಟ ಪ್ರಾರಂಭವಾಗಿದೆ.
PublicNext
23/05/2022 09:19 am