ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇರೆಗೆ ಪೋಕ್ಸೋ ಕಾಯ್ದೆ ಅಡಿ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ.ಇನ್ನು ನ್ಯಾಯಾಲಯಕ್ಕೆ ಯಾವುದೇ ಮಾಹಿತಿ ನೀಡದೆ ಮುರುಘಾ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣ ಅವರನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ.
ಹೌದು ಶ್ರೀಗಳನ್ನು ಹೆಚ್ಚಿನ ವಿಚಾರಣೆಗಾಗಿ ಇಂದು ಕೋರ್ಟ್ ಗೆ ಹಾಜರುಪಡಿಸಬೇಕಿತ್ತು . ಇಂದು ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿ ಎಲ್ಲಿ ಎಂದು ಕೋರ್ಟ್ ಪ್ರಶ್ನಿಸುತ್ತಿದ್ದಂತೆ ಪೊಲೀಸರು ಅವರು ಆಸ್ಪತ್ರೆಯಲ್ಲಿದ್ದಾರೆ ಎಂದು ಉತ್ತರ ನೀಡಿದ್ದಾರೆ.
ಇದಕ್ಕೆ ಒಪ್ಪದ ಕೋರ್ಟ್ ತಕ್ಷಣ ಆರೋಪಿಯನ್ನು ಹಾಜರುಪಡಿಸಬೇಕು ಇಲ್ಲವೆ ಮೆಡಿಕಲ್ ರಿಪೋರ್ಟ್ ಹಾಜರುಪಡಿಸುವಂತೆ ಸೂಚಿಸಿದೆ.
ಇನ್ನು ಕೋರ್ಟ್ ಸೂಚನೆಯಂತೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲು ಕರೆದುಕೊಂಡು ಹೋಗುತ್ತಿದ್ದಾರೆ.
PublicNext
02/09/2022 04:18 pm