ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ರೈತ ವಿರೋಧಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ತುತ್ತಿದೆ, ಸೋಮವಾರ ರೈತರು ಕರ್ನಾಟಕ ಬಂದ್​ಗೆ ಕರೆ ನೀಡಲಾದಿದ್ದು, ವಿವಿಧ ರೈತ ಹಾಗೂ ಕನ್ನಡಪರ ಸಂಘಟನೆಗಳು ಸೆ. 28ರಂದು ಸಂಪೂರ್ಣ ಕರ್ನಾಟಕ ಬಂದ್​ಗೆ ಕರೆ ನೀಡಿವೆ.

ಹೀಗಾಗಿ ಸೋಮವಾರ ರಾಜ್ಯ ಸಂಪೂರ್ಣ ಬಂದ್ ಆಗಿರಲಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ರೈತರು ಈ ಹೋರಾಟ ಕೈಗೊಂಡಿದ್ದಾರೆ. ರೈತರೊಂದಿಗೆ ವಿವಿಧ ಸಂಘಟನೆಗಳು ಕೂಡ ಕೈ ಜೋಡಿಸಿದ್ದರಿಂದಾಗಿ ನಾಳೆ ರಾಜ್ಯವು ಸಂಪೂರ್ಣವಾಗಿ ಬಂದ್ ಆಗಿರಲಿದೆ.

ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದ ವಿವಿಧ ಸಂಘಟನೆಗಳು, ಮಹಾದಯಿ ಹೋರಾಟ ಸಂಘಟನೆ, ಓಲಾ, ಊಬರ್, ಕ್ಯಾಬ್, ಆಟೋ, ಟ್ಯಾಕ್ಸಿ ಅಸೋಸಿಯೇಶನ್, ಆಟೋ ಮಿತ್ರ, ಪೀಸ್ ಆಟೋ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಟ್ಯಾಕ್ಸಿ ಮಾಲೀಕರ ಸಂಘಗಳು, 35 ರೈತ ಪರ ಸಂಘಟನೆಗಳೊಂದಿಗೆ ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು ಹೋರಾಟಕ್ಕೆ ಬೆಂಬಲ ನೀಡಿವೆ, ಹೀಗಾಗಿ ಹೋರಾಟ ನಾಳೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿ ಆದೇಶ ಹೊರಡಿಸಿದೆ. ಆದರೆ, ಬಂದ್ ಸಂದರ್ಭದಲ್ಲಿ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಮಾತ್ರ ಕಾರ್ಯ ನಿರ್ವಹಿಸಲಿವೆ. ಹೊಟೇಲ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಸಾರಿಗೆ ಸಂಸ್ಥೆ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿವೆ. ಆದರೆ, ನಾಳೆಯ ಪರಿಸ್ಥಿತಿಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇನ್ನು, ಎಂದಿನಂತೆ ಸರ್ಕಾರಿ ಸೇವೆ ವಾಹನಗಳು, ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ. ಅಂಗಡಿ ಮುಂಗಟ್ಟುಗಳು, ಮಾಲ್​ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್​ಗೆ ಬೆಂಬಲ ಸೂಚಿಸಿದ್ದು ಸಂಪೂರ್ಣ ಸ್ತಬ್ಧವಾಗಲಿದೆ.

ನಾಳೆ ಓಲಾ - ಉಬರ್, ಆಟೋ - ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿರುವ ಕಾರಣಕ್ಕೆ ಈ ಸೇವೆಗಳು ಜನರಿಗೆ ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಆಗಿರಲಿವೆ. ಅಂಗಡಿ -ಮುಂಗಟ್ಟುಗಳು ಬಂದ್ ಆಗಿರಲಿವೆ. ಮಾಲ್ ಗಳು ತೆರೆದಿರುವುದಿಲ್ಲ. ಆದರೆ,

ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ ಮಾಡಲು ನಿರ್ಧರಿಸಲಾಗಿದೆ.

ಕಳೆದ 6 ದಿನಗಳಿಂದ ಹೋರಾಟ ಮಾಡುತ್ತಿರುವ ರೈತರ ಪ್ರತಿಭಟನೆಗೆ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರಕ್ಕೆ ರೈತರ ಬಿಸಿ ಎಷ್ಟರ ಮಟ್ಟಿಗೆ ತಟ್ಟುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

Edited By :
PublicNext

PublicNext

27/09/2020 11:41 am

Cinque Terre

86.09 K

Cinque Terre

9

ಸಂಬಂಧಿತ ಸುದ್ದಿ