ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರಿಗೆ ಬೀಗ

ಬೆಂಗಳೂರು: ಕೊರೊನಾ ಆತಂಕದಿಂದಾಗಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ನಾಳೆ ಬೆಳಗ್ಗೆ 6 ಗಂಟೆಯವರೆಗೂ 144 ಸೆಕ್ಷನ್ ಜಾರಿಯಲ್ಲಿ ಇರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಹೊಸ ಮಾದರಿಯ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೊದಲು ಇಂದು ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲು ನಿರ್ಧರಿಸಲಾಗಿತ್ತು. ಆದರೆ ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ದೃಷ್ಟಿಯಿಂದ ಇಂದು ಮಧ್ಯಾಹ್ನದಿಂದಲೇ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಲ್ ಪಂತ್ ತಿಳಿಸಿದ್ದಾರೆ.

ನ್ಯೂ ರೂಲ್ಸ್‌:

ಹೊಸ ವರ್ಷಾಚರಣೆಗೆ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆ ಬಳಿಕ ಬೆಂಗಳೂರಿನ 6 ಪ್ರಮುಖ ರಸ್ತೆಗಳು ಕಂಪ್ಲೀಟ್ ಬಂದ್ ಆಗಲಿವೆ. ಹೀಗಾಗಿ ಈ ರಸ್ತೆಗಳತ್ತ ಬಂದರೆ ತೊಂದರೆ ಅನುಭವಿಸಬೇಕಾಗುತ್ತದೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರೋಡ್, ರೆಸಿಡೆನ್ಸಿ ರೋಡ್, ರೆಸ್ಟ್ ಹೌಸ್ ಪಾರ್ಕ್ ರೋಡ್​ಗಳಿಗೆ ಬ್ಯಾರಿಕೇಡ್ ಹಾಕಿ ಲಾಕ್ ಮಾಡಲಾಗುವುದು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಕೂಡ ಸಂಪೂರ್ಣ ಬಂದ್ ಆಗಲಿವೆ. ಜೊತೆಗೆ ನಗರದ ಎಲ್ಲಾ ಫ್ಲೈ ಓವರ್ ಗಳು ಕೂಡ ಬಂದ್ ಆಗಲಿವೆ.

Edited By : Vijay Kumar
PublicNext

PublicNext

31/12/2020 11:23 am

Cinque Terre

81.98 K

Cinque Terre

7

ಸಂಬಂಧಿತ ಸುದ್ದಿ