ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ; ಕೃಷಿ ಕಾಯ್ದೆ ತಡೆಗೆ ಶಿಫಾರಸ್ಸು

ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಅನ್ನದಾತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ಅನೇಕ ಬಾರಿ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿದರು ಪ್ರಯೋಜನವಾಗಿರಲಿಲ್ಲ.ಕೃಷಿ ಕಾನೂನಿಗೆ ಸಂಬಂಧಿಸಿದಂತೆ ರೈತರ ಪ್ರತಿಭಟನೆ ಕುರಿತಾದ ಅರ್ಜಿಗಳ ವಿಚಾರಣೆಯನ್ನು ಇಂದು (ಸೋಮವಾರ) ಸುಪ್ರೀಂ ಕೋರ್ಟ್ ನಡೆಸಿದೆ.

ದೇಶಾದ್ಯಂತ ರೈತರ ಹೋರಾಟಕ್ಕೆ ಕಾರಣವಾಗಿರುವ ಕೃಷಿ ಸುಧಾರಣಾ ಕಾಯ್ದೆಗಳನ್ನು ಸದ್ಯದ ಮಟ್ಟಿಗೆ ತಡೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸಮಿತಿ ರೈತರ ನಡುವೆ ಒಂದು ಒಪ್ಪಂದ ಬರುವವರೆಗೂ ತಡೆ ನೀಡಬೇಕೆಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರನ್ನೊಳಗೊಂಡ ನ್ಯಾಯಾಪೀಠವು ಈ ಸೂಚನೆ ನೀಡಿದೆ.

ಕಾಯ್ದೆಗಳಿಂದಾಗಿ ದೇಶದಲ್ಲಾದ ಬೆಳವಣಿಗೆಗಳ ಕುರಿತು ನ್ಯಾಯಾಲಯ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರ ಕಾಯ್ದೆಯಲ್ಲಿ ಬದಲಾವಣೆಗಳನ್ನು ಮಾಡಲು ಸಿದ್ಧವಿದೆ ಎಂದು ತಿಳಿಸಿದೆ. ಆದರೆ ರೈತರು ಕಾಯ್ದೆಗಳನ್ನು ಕೈ ಬಿಡುವಂತೆ ಒತ್ತಾಯಿಸುತ್ತಿದ್ದಾರೆ. ಹಲವಾರು ಸುತ್ತಿನ ಸಭೆಗಳು ವಿಫಲವಾಗಿದೆ ಎನ್ನುವುದನ್ನು ನಾವು ವರದಿಯಿಂದ ತಿಳಿದುಕೊಂಡಿದ್ದೇವೆ. ಹಾಗಾಗಿ ಕೇಂದ್ರದ ಸಮಿತಿ ಅಂತಿಮ ನಿರ್ಧಾರಕ್ಕೆ ಬರುವವರೆಗೂ ಕಾಯ್ದೆ ಜಾರಿಗೆ ತಡೆ ನೀಡಬೇಕಿದೆ ಎಂದು ತಿಳಿಸಲಾಗಿದೆ.

ರೈತರಲ್ಲು ಪ್ರತಿಭಟನೆಯ ಸ್ಥಳವನ್ನು ಬದಲಾಯಿಸಿ ಎಂದು ಕೇಳಬಹುದು. ಆದರೆ ಪ್ರತಿಭಟನೆಯನ್ನೇ ನಿಲ್ಲಿಸಿ ಎಂದು ಕೇಳುವ ಹಾಗಿಲ್ಲ. ಪ್ರತಿಭಟನಾ ಸ್ಥಳದಲ್ಲಿ ಆಗುತ್ತಿರುವ ಸಾವು ನೋವಿಗೆ ನಾವೆಲ್ಲರೂ ಕಾರಣರಾಗುತ್ತೇವೆ. ಹಾಗಾಗಿ ಸದ್ಯದ ಮಟ್ಟಿಗೆ ಕಾಯ್ದೆ ಜಾರಿಗೆ ತಡೆ ನೀಡುವುದೇ ಸೂಕ್ತ.

ಕೇಂದ್ರ ಸರ್ಕಾರಕ್ಕೆ ಜವಾಬ್ದಾರಿಯಿದ್ದರೆ ಮೊದಲು ಕಾಯ್ದೆಯ ಅನುಷ್ಠಾನಕ್ಕೆ ತಡೆ ನೀಡಬೇಕು. ಇಲ್ಲವಾದರೆ ನಾವು ಆ ಕೆಲಸ ಮಾಡಲು ಸಿದ್ಧವಿದ್ದೇವೆ. ಅವರು ತಡೆ ನೀಡದಿದ್ದರೆ, ನಾವು ಈ ಬಗ್ಗೆ ನಿರ್ಧರಿಸಲು ತಜ್ಞರ ಸಮಿತಿ ರೂಪಿಸುತ್ತೇವೆಂದು ಎಂದು ನ್ಯಾಯಾಲಯ ತಿಳಿಸಿದೆ.

Edited By : Nirmala Aralikatti
PublicNext

PublicNext

11/01/2021 03:15 pm

Cinque Terre

49.39 K

Cinque Terre

6

ಸಂಬಂಧಿತ ಸುದ್ದಿ