ನವದೆಹಲಿ: ನೂತನ ಕೃಷಿ ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿ ಹಾಗೂ ರೈತರ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಕೋರಿ ದಾಖಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿತ್ತು.
ವಿಚಾರಣೆ ನಂತರ ಆದೇಶ ಪ್ರಕಟಿಸಿದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳನ್ನು ಜಾರಿಗೊಳಿಗೊಳಿಸುವುದನ್ನು ತಡೆ ನೀಡಿ ಮಧ್ಯಂತರ ಆದೇಶ ಪ್ರಕಟಿಸಿದೆ. ಅಲ್ಲದೇ ಕೃಷಿ ಕಾನೂನುಗಳ ಸಂಪೂರ್ಣ ಚಿತ್ರಣಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
PublicNext
12/01/2021 01:59 pm