ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಕಳೆದ ವರ್ಷ ಜುಲೈನಲ್ಲಿ ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ವ್ಯಕ್ತಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ ಹಾಗೂ 1,050 ರೂ. ದಂಡ ವಿಧಿಸಿದೆ.
ಅಪರಾಧಿಯನ್ನು ವಾಗ್ಲೆ ಎಸ್ಟೇಟ್ ನಿವಾಸಿ ವಿಜಯ್ ಚಾಕ್ಲೆ (40) ಎಂದು ಗುರುತಿಸಲಾಗಿದೆ. ಅಪರಾಧಿಯು ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ. ಅಷ್ಟೇ ಅಲ್ಲದೆ ಡ್ರಗ್ ವ್ಯಸನಿಯಾಗಿದ್ದ ಎಂದು ವರದಿಯಾಗಿದೆ.
ಥಾಣೆಯ ಹಳೆ ಪಾಸ್‌ಪೋರ್ಟ್ ಕಚೇರಿ ಬಳಿ 2020ರ ಜುಲೈನಲ್ಲಿ ನಡೆದ ಪ್ರಕರಣ ಇದಾಗಿದೆ. ಕೆಲ ಸ್ಥಳೀಯರು ಬೀದಿ ನಾಯಿಗಳಿಗೆ ಆಹಾರ ನೀಡಲು ಹೋದಾಗ ವಿಜಯ್ ಚಾಕ್ಲೆ ಕೃತ್ಯ ಗಮನಕ್ಕೆ ಬಂದಿದೆ. ತಕ್ಷಣವೇ ಸ್ಥಳೀಯರು ಪ್ರಾಣಿ ದಯಾ ಸಂಘದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಘಟನೆ ಕುರಿತು ಪೊಲೀಸರಿಗೆ ತಿಳಿಸಲಾಗಿದೆ. ಈ ಸಂಬಂಧ ಶ್ರೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.
ಈ ಕುರಿತು ವಿಚಾರಣೆ ನಡೆಸಿದ ಥಾಣೆ ಜಿಲ್ಲಾ ನ್ಯಾಯಾಲಯವು ಅಪರಾಧಿಗೆ 6 ತಿಂಗಳು ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
PublicNext
13/01/2021 04:03 pm