ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವದ ಗೋ ಹತ್ಯೆ ನಿಷೇಧ ಕಾಯಿದೆ ಇಂದಿನಿಂದ (ಸೋಮವಾರ) ಅಧಿಕೃತವಾಗಿ ಜಾರಿಗೆ ಬರಲಿದೆ. ಈ ಸಂಬಂಧ ಪಶುಸಂಗೋಪನಾ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದ್ದು, ''ಗೋಹತ್ಯೆ ನಿಷೇಧದ ಹಿನ್ನೆಲೆ ರಾಸುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು'' ಎಂದು ಹೇಳಿದರು.
ಶಿಕ್ಷೆ ಏನು?: ಒಂದು ವೇಳೆ ಗೋ ಹತ್ಯೆ ನಿಷೇಧ ಕಾಯಿದೆ ಉಲ್ಲಂಘಿಸಿದರೆ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ, ಐದು ಲಕ್ಷ ರೂಪಾಯಿ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಅಕ್ರಮವಾಗಿ ಗೋವುಗಳ ಸಾಗಾಟ ಮಾಡುವುದು ಕಂಡುಬಂದರೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ಇದಲ್ಲದೇ ಇನ್ನೂ ಹತ್ತು ಹಲವಾರು ಮಾರ್ಗಸೂಚಿಯಲ್ಲಿ ನೀಡಲಾಗಿದೆ.
PublicNext
18/01/2021 11:39 am