ಬೆಂಗಳೂರು: ದೆಹಲಿಯಲ್ಲಿ ರೈತರ ಪ್ರತಿಭಟನೆ ಕಿಚ್ಚು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್ನೆಟ್ ಸೇವೆಯನ್ನು ರದ್ದು ಮಾಡಲಾಗಿದೆ. ರೈತರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ರೈತರು ಕೆಂಪುಕೋಟೆಯತ್ತ ಹೆಜ್ಜೆ ಹಾಕಿದ್ದಾರೆ. ಅಲ್ಲಿರುವ ಸಾಕಷ್ಟು ರೈತರು ಫೇಸ್ಬುಕ್ ಲೈವ್ ಮಾಡಿ ಉಳಿದ ರೈತರು ಕೆಂಪುಕೋಟೆಯತ್ತ ಬರುವಂತೆ ಸ್ಫೂರ್ತಿ ನೀಡಿದ್ದರು. ಜತೆಗೆ ವಾಟ್ಸ್ಆ್ಯಪ್ ಸಂದೇಶಗಳು ಕಾಡ್ಗಿಚ್ಚಿನಂತೆ ಹರಡಿದ್ದವು. ಇವುಗಳನ್ನು ತಡೆಯುವ ಉದ್ದೇಶದಿಂದ ಕೆಂಪುಕೋಟೆ ಸುತ್ತಮುತ್ತಲ ಭಾಗ ಸೇರಿ ಅನೇಕ ಕಡೆಗಳಲ್ಲಿ ಇಂಟರ್ನೆಟ್ ಸೇವೆ ರದ್ದು ಮಾಡಲಾಗಿದೆ.
PublicNext
26/01/2021 05:41 pm