ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಇದರಿಂದಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆಸಿದ್ದಾರೆ.
ಸಿಂಘು ಬಾರ್ಡರ್ನಲ್ಲಿ ಸಿಂಘು ಸ್ಥಳೀಯರು ಪ್ರತಿಭಟನಾ ನಿರತ ರೈತರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಈ ವೇಳೆ ಪೊಲೀಸರು ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದರು. ಈ ಮಧ್ಯೆಯೂ ಸ್ಥಳೀಯರು ಮತ್ತು ರೈತರ ನಡುವೆ ಕಲ್ಲುತೂರಾಟ ನಡೆದಿದೆ. ಕಲ್ಲು ತೂರಾಟ ನಡೆಸಿದ ಸ್ಥಳೀಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ.
PublicNext
29/01/2021 02:22 pm