ನವದೆಹಲಿ: ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಯಲ್ಲಿ ನಿನ್ನೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದ ವ್ಯಕ್ತಿ ಸೇರಿದಂತೆ 44 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವ ಉದ್ದೇಶದಿಂದ ಪೊಲೀಸರು ಶುಕ್ರವಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ರೈತರು ಇದಕ್ಕೆ ಪ್ರತಿದಾಳಿ ನಡೆಸಿದ್ದಾರೆ ಎನ್ನಲಾಗಿತ್ತು. ಈ ವೇಳೆ ಅಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಆರೋಪಿಯು ತಲವಾರಿನಿಂದ ಹಲ್ಲೆ ಮಾಡಿದ್ದ. ಪರಿಣಾಮ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
PublicNext
30/01/2021 07:52 am