ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಪಾಕಿಸ್ತಾನ ಸೇನೆಯು ಬುಧವಾರ ನಡೆಸಿದ ಗುಂಡಿನ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮೂಲಕ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದಾಗಿ ಈ ವರ್ಷ ಒಟ್ಟು ನಾಲ್ವರು ಸೈನಿಕರು ಸಾವಿಗೀಡಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ವಕ್ತಾರರು, ಹುತಾತ್ಮ ಯೋಧ ಸಿಪಾಯಿ ಲಕ್ಷ್ಮಣ್ ರಾಜಸ್ಥಾನದ ಜೋಧ್‌ಪುರನ ನಿವಾಸಿದ್ದಾರೆ. ಸಿಪಾಯಿ ಲಕ್ಷ್ಮಣ್ ಅವರು ಧೈರ್ಯಶಾಲಿ ಮತ್ತು ಪ್ರಾಮಾಣಿಕ ಸೈನಿಕರಾಗಿದ್ದರು. ಅವರ ತ್ಯಾಗಕ್ಕೆ ದೇಶ ಸದಾ ಋಣಿಯಾಗಿದೆ ಎಂದು ಹೇಳಿದ್ದಾರೆ.
ಸುಂದರ್‌ಬನಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿ ವೇಳೆ ಲಕ್ಷ್ಮಣ್ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.
PublicNext
04/02/2021 12:14 pm