ನವದೆಹಲಿ: ಇಲ್ಲಿನ ಸಿಂಘು ಹಾಗೂ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಈ ನಡುವೆ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ 40 ಲಕ್ಷ ಟ್ರ್ಯಾಕ್ಟರ್ ಗಳನ್ನು ತಂದು ಹೋರಾಟ ಮಾಡುವುದು ನಮ್ಮ ಮುಂದಿನ ಗುರಿ ಎಂದಿದ್ದಾರೆ. ಅನ್ನದಾತರು 2021ರ ಕಿಸಾನ್ ಕ್ರಾಂತಿಗೆ ತಯಾರಾಗಬೇಕಿದೆ.
ಈಗಾಗಲೇ ಟಿಕ್ರಿ ಹಾಗೂ ಸಿಂಘು ಗಡಿಯಲ್ಲಿ ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳ ರೈತರು ಟ್ರ್ಯಾಕ್ಟರ್ ಸಮೇತ ಬೀಡು ಬಿಟ್ಟು ಹೋರಾಟ ನಡೆಸುತ್ತಿದ್ದಾರೆ.
PublicNext
07/02/2021 04:59 pm