ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಎರಡು ವರ್ಷಗಳಾಗಿದ್ದು, ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ. ಆದರೆ ಇದೇ ದಿನ ಉಗ್ರರು ದಾಳಿ ನಡೆಸಲು ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದೆ.
ಉಗ್ರರು ಅತಿದೊಡ್ಡ ಸ್ಫೋಟಕ್ಕೆ ಸಂಚು ರೂಪಿಸಿ ಭಾರೀ ಪ್ರಮಾಣದಲ್ಲಿ ಐಇಡಿ ಸ್ಫೋಟಕಗಳನ್ನು ಸಂಗ್ರಹಿಸಿದ್ದರು ಎನ್ನಲಾಗಿದೆ. ರಕ್ಷಣಾಪಡೆಗಳು ಬ್ಯಾಗ್ವೊಂದರಲ್ಲಿದ್ದ ಸುಮಾರು 7 ಕೆಜಿ ಐಇಡಿಗಳನ್ನು ಜಮ್ಮು ಬಸ್ ನಿಲ್ದಾಣದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
PublicNext
14/02/2021 06:11 pm