ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದು ಮಧ್ಯರಾತ್ರಿಯಿಂದ ಫಾಸ್ಟ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಇನ್ಮುಂದೆ ಪಾಸ್ಟ್ ಟ್ಯಾಗ್ ಇಲ್ಲದೇ ಹೋದಲ್ಲಿ ಟೋಲ್ ಪ್ರಮಾಣದ ದುಪ್ಪಟ್ಟು ಮೊತ್ತ ಕಟ್ಟಬೇಕಾಗುತ್ತದೆ.
ಈಗಾಗಲೇ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸುವ ದಿನಾಂಕವನ್ನು ಹಲವು ಬಾರಿ ಮುಂದೂಡಿಕೆ ಮಾಡಲಾಗಿತ್ತು. ಇನ್ನು ಮುಂದೆ ಯಾವುದೇ ಕಾರಣಕ್ಕೂ ದಿನಾಂಕ ಮಿತಿಗೊಳಿಸುವ ಅಥವಾ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕರಾರುವಕ್ಕಾಗಿ ಹೇಳಿದ್ದಾರೆ.
PublicNext
15/02/2021 08:34 am