ಬೆಂಗಳೂರು: ಟ್ರಾಫಿಕ್ ಜಂಕ್ಷನ್ಗಳಲ್ಲಿ ಭಿಕ್ಷೆ ಬೇಡುವವರಿಂದ ರಾಜಧಾನಿಯ ವಾಹನ ಸವಾರರಿಗೆ ಕಿರಿಕಿರಿ ಜೊತೆ ಸಂಚಾರ ದಟ್ಟಣೆಯಾಗುತ್ತಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ವ್ಯಾಪ್ತಿಯ ಎಲ್ಲ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ನಗರದಲ್ಲಿ ರಸ್ತೆಬದಿ ಅಥವಾ ಟ್ರಾಫಿಕ್ ಜಂಕ್ಷನ್ಗಳಲ್ಲಿ ಭಿಕ್ಷುಕರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ, ಭಿಕ್ಷೆ ಬೇಡುವಾಗ ಹಣ ಕೊಡದವರ ಜೊತೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ.
ಹೀಗಾಗಿ, ಟ್ರಾಫಿಕ್ ಸಿಗ್ನಲ್ನಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಕಾನೂನು ಸುವ್ಯವಸ್ಥೆ ವಿಭಾಗ ಹಾಗೂ ಟ್ರಾಫಿಕ್ ಪೊಲೀಸರ ಜೊತೆ ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕೆಂದು ಡಿಸಿಪಿಗಳಿಗೆ ಸೂಚಿಸಿದ್ದಾರೆ.
PublicNext
16/02/2021 03:35 pm