ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿಶಾ ರವಿಗೆ ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ

ನವದೆಹಲಿ: ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಅಂತಾರಾಷ್ಟ್ರೀಯ ತಾರೆಯರಿಗೆ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಕುರಿತಾದಂತೆ ಟೂಲ್‌ ಕಿಟ್‌ ನೀಡಿದ್ದಾರೆಂಬ ಆರೋಪದ ಮೇರೆಗೆ ಪರಿಸರ ಕಾರ್ಯಕರ್ತೆ ದಿಶಾ ರವಿಯವರನ್ನು ಪೊಲೀಸರು ಬಂಧಿಸಿದ್ದರು. ಅವರ ಟೂಲ್‌ ಕಿಟ್‌ ನಿಂದಾಗಿಯೇ ಗಣರಾಜ್ಯೋತ್ಸವ ದಿನದಂದು ಹಿಂಸಾಚಾರ ನಡೆಯಿತು ಎಂದು ಪೊಲೀಸರು ಹೇಳಿಕೆ ನೀಡಿದ್ದರು. ಇದೀಗ ಇಂದು ನ್ಯಾಯಾಲಯಕ್ಕೆ ಹಾಜರಾದ ದಿಶಾ ರವಿಯವರ ಪೊಲೀಸ್‌ ಕಸ್ಟಡಿಯನ್ನು ಇನ್ನೂ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮೊದಲು ತನಿಖೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪೊಲೀಸರು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ತಡೆಯಲು ದಿಶಾ ರವಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ತನ್ನ ಮತ್ತು ಮೂರನೇ ವ್ಯಕ್ತಿಗಳ ನಡುವೆ ನಡೆದಿರುವ ವಾಟ್ಸ್ ಆ್ಯಪ್ ಸಂದೇಶ ಸೇರಿದಂತೆ ಯಾವುದೇ ಖಾಸಗಿ ಚಾಟ್ ಗಳ ವಿಷಯಗಳನ್ನು ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ತಡೆ ಹೇರುವಂತೆಯೂ ಅರ್ಜಿಯಲ್ಲಿ ಕೋರಲಾಗಿತ್ತು.

Edited By : Nirmala Aralikatti
PublicNext

PublicNext

19/02/2021 06:06 pm

Cinque Terre

70.18 K

Cinque Terre

5

ಸಂಬಂಧಿತ ಸುದ್ದಿ