ನವದೆಹಲಿ: 2019ರ ಪುಲ್ವಾಮಾ ಭಯೋತ್ಪಾದಕ ದಾಳಿ ರೂವಾರಿಗಳಲ್ಲಿ ಒಬ್ಬನಾದ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಅಬು ಸೈಫುಲ್ಲಾ ಅಲಿಯಾಸ್ ಲಂಬೂ ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಶನಿವಾರ(ಜುಲೈ 31) ರಂದು ಕಾಶ್ಮೀರದಲ್ಲಿ ಹತ್ಯೆಗೀಡಾಗಿದ್ದಾನೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಯಾಗಿರುವ ಸೈಫುಲ್ಲಾ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯ ರೂವಾರಿಗಳಲ್ಲಿ ಒಬ್ಬನಾಗಿದ್ದ. ಈ ಘಟನೆಯಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಸೈಫುಲ್ಲಾ ಜೈಶ್ ಉಗ್ರಗಾಮಿ ಸಂಘಟನೆ ಸ್ಥಾಪಕ ಮೌಲಾನಾ ಮಸೂದ್ ಅಝರ್ ನ ಸಂಬಂಧಿಯಾಗಿದ್ದು, ಸೈಫುಲ್ಲಾ 2017ರಲ್ಲಿ ಭಾರತಕ್ಕೆ ನುಸುಳಿ ಬಂದ ಮೇಲೆ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದಾಗಿ ವರದಿ ವಿವರಿಸಿದೆ.
PublicNext
31/07/2021 10:47 pm