ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆಗಾಸಸ್ ಪ್ರಕರಣ ಆಗಸ್ಟ್ 5 ರಂದು ಸುಪ್ರೀಂ ನಲ್ಲಿ ಅರ್ಜಿ ವಿಚಾರಣೆ!

ನವದೆಹಲಿ:ದೇಶದಲ್ಲಿ ವಿವಾದ ಸೃಷ್ಟಿಸಿರುವ ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಗುರುವಾರ (ಆ.5) ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿಕುಮಾರ್, ಕಮ್ಯುನಿಸ್ಟ್ ಮಾರ್ಕ್ಸಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ನಾಗರಿಕರು, ರಾಜಕಾರಣಿಗಳು, ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಗೂಢಚರ್ಯೆಗೆ ಗುರಿ ಮಾಡಲಾಗಿದೆ. ಈ ವಿಚಾರ ದೇಶದಾದ್ಯಂತ, ವಿಶ್ವದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಈ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ಎತ್ತಿಕೊಳ್ಳಬೇಕು’ ಎಂದು ಪ್ರತಿಪಾದಿಸಿದ್ದರು.

Edited By : Nirmala Aralikatti
PublicNext

PublicNext

01/08/2021 02:51 pm

Cinque Terre

37.89 K

Cinque Terre

14

ಸಂಬಂಧಿತ ಸುದ್ದಿ