ಬೆಂಗಳೂರು: ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಿದ್ದಾರೆ.
ಹೌದು. ಪೊಲೀಸರು ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಕಾರ್ಯಕ್ರಮದ ಬಗ್ಗೆ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು. ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಘಟಕಾಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
PublicNext
02/08/2021 08:29 pm