ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್ಟಿಕಲ್ 370 ರದ್ದಾಗಿ 2 ವರ್ಷ, ಕಾಶ್ಮೀರಲ್ಲಿ ಸ್ಫೋಟ!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿ 2 ವರ್ಷ ಪೂರ್ಣಗೊಂಡ ದಿನವೇ ಶ್ರೀನಗರದ ಜನಬಿಡದಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.

ಗುರುವಾರ ಮಧ್ಯಾಹ್ನ ನೌಹಟ್ಟಾ ಪ್ರದೇಶದ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ. ಸ್ಫೋಟದ ನಂತರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಗುಂಡುಗಳನ್ನು ಹಾರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸ್ಫೋಟದ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಮಾಡುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವುನೋವು ವರದಿಯಾಗಿಲ್ಲ.

Edited By : Nirmala Aralikatti
PublicNext

PublicNext

05/08/2021 03:44 pm

Cinque Terre

59.25 K

Cinque Terre

5

ಸಂಬಂಧಿತ ಸುದ್ದಿ