ಬೆಂಗಳೂರು: ಇದೇ ಮೊದಲ ಬಾರಿಗೆ ಲೋಕ್ ಅದಾಲತ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ಬಗೆಹರಿದಿವೆ. ಆಗಸ್ಟ್ 14ರಂದು ನಡೆದ ಮೆಗಾ ಲೋಕ್ ಅದಾಲತ್ ನಲ್ಲಿ 3.88 ಲಕ್ಷ ಪ್ರಕರಣಗಳು ರಾಜಿ ಸಂಧಾನ ಮೂಲಕ ಇತ್ಯರ್ಥವಾಗಿವೆ.
ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಷ್ಟ್ರೀಯ ದಾಖಲೆ ನಿರ್ಮಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಅವರಿಂದ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಲೋಕ ಅದಾಲತ್ ನಲ್ಲಿ 79,207 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 5,32,326 ಪ್ರಕರಣಗಳು ಸೇರಿ ಒಟ್ಟು 6,11,533 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರಿತಿಸಲಾಗಿತ್ತು.
PublicNext
18/08/2021 09:41 am