ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತೀಯ ಸೈನಿಕರಿಂದ ಎನ್ ಕೌಂಟರ್ ಮೂವರು ಉಗ್ರರು ಫಿನಿಶ್

ಶ್ರೀನಗರ : ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಷ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಭಾರತೀಯ ಸೇನೆ ಯೋಧರು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದ ಮೇಲ್ಭಾಗ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

21/08/2021 09:43 am

Cinque Terre

45.68 K

Cinque Terre

10

ಸಂಬಂಧಿತ ಸುದ್ದಿ