ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲಾ 9 ಹೆಸರುಗಳಿಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಇದರಲ್ಲಿ ಕರ್ನಾಟಕ ಹೈಕೋರ್ಟ್‌ನ ಇಬ್ಬರು ಸೇರಿ ಒಟ್ಟು 8 ನ್ಯಾಯಮೂರ್ತಿಗಳು ಮತ್ತು ಒಬ್ಬರು ವಕೀಲರು ಸೇರಿದ್ದಾರೆ.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್, ಓಕಾ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್, ಸಿಕ್ಕಿಂ ಮುಖ್ಯ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ಹಿರಿಯ ವಕೀಲ ಪಿ.ಎಸ್.ನರಸಿಂಹ ಅವರ ಹೆಸರನ್ನು ಸುಪ್ರೀಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
PublicNext
26/08/2021 11:25 am