ಲಕ್ನೋ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ಬುಧವಾರ ಸಲಹೆ ನೀಡಿದೆ.
ಗೋ ಹತ್ಯೆ ಆರೋಪದಲ್ಲಿ ಸಿಲುಕಿದ್ದ ಜಾವೇದ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಡೆಸಿತ್ತು. ವಿಚಾರಣೆ ಬಳಿಕ ಜಾಮೀನು ನೀಡಲು ನಿರಾಕರಿಸಿದೆ.
ಗೋವುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ಹಿಂದೂ ಧರ್ಮೀಯ ವ್ಯಕ್ತಿಯ ಮೂಲಭೂತ ಕರ್ತವ್ಯವಾಗಬೇಕು. ಸಂಸ್ಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಗೋವಿಗೆ ರಾಷ್ಟ್ರಪ್ರಾಣಿಯ ಸ್ಥಾನಮಾನ ನೀಡಬೇಕು. ಈ ನಿಟ್ಟಿನಲ್ಲಿ ಮಸೂದೆಯನ್ನು ರಚಿಸಿ, ಸಂಸತ್ತಿನಲ್ಲಿ ಮಂಡಿಸಬೇಕು. ಗೋವುಗಳನ್ನು ರಕ್ಷಿಸಿದರೆ ಮಾತ್ರ ದೇಶ ಸಮೃದ್ಧಿಯಿಂದ ಕೂಡಿರಲು ಸಾಧ್ಯ ಎಂದು ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಶೇಖರ್ ಯಾದವ್ ಅವರಿದ್ದ ಪೀಠವು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಪೆಟ್ಟು ಬಿದ್ದಾಗ ದೇಶ ದುರ್ಬಲಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟಿದೆ.
PublicNext
01/09/2021 10:54 pm