ಬೆಂಗಳೂರು: ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಸ್ಥಾಪಿಸಲು ಅನುಮತಿ ನೀಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಮೈಸೂರಿನ ಗನ್ ಹೌಸ್ ಸರ್ಕಲ್ನಲ್ಲಿ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಯನ್ನು ಪ್ರಶ್ನಿಸಿ ಕ್ಷತ್ರಿಯ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪಾದಚಾರಿ ಮಾರ್ಗಗಳು, ರಸ್ತೆಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಮೆ ಸ್ಥಾಪನೆ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಬೇಡಿ ಎಂದಿದೆ.
ಮೈಸೂರಿನ ಗನ್ ಹೌಸ್ ಸರ್ಕಲ್ ನಲ್ಲಿ ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ ಪ್ರತಿಮೆ ಸ್ಥಾಪಿಸುವ ಮೈಸೂರು ಪಾಲಿಕೆಯ ನಿರ್ಣಯವನ್ನು ರದ್ದುಗೊಳಿಸಿ ನ್ಯಾಯಪೀಠವು ಆದೇಶ ಹೊರಡಿಸಿದೆ. ಗನ್ ಹೌಸ್ ಸರ್ಕಲ್ ರಸ್ತೆ ಮಧ್ಯದಲ್ಲಿದೆ. ಸುಪ್ರೀಂ ಕೋರ್ಟ್ ಪ್ರತಿಮೆಗಳ ಸ್ಥಾಪನೆಗೆ ನಿರ್ಬಂಧ ಹೇರಿದೆ. ಹೀಗಾಗಿ ಸುಪ್ರೀಂ ಆದೇಶವನ್ನು ಆಧರಿಸಿ ಹೈಕೋರ್ಟ್ ಈ ನಿರ್ದೇಶನ ನೀಡಿದೆ.
PublicNext
08/09/2021 06:42 pm