ಬೆಂಗಳೂರು : ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಬಯಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಹೌದು ರೈಲ್ವೆ ಇಲಾಖೆ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
2024ರಲ್ಲಿ ನಿವೃತ್ತಿ ಆಗಲಿರುವ ಅವರು ನಿವೃತ್ತಿಗೆ ಮುನ್ನ ಸ್ವಯಂ ನಿವೃತ್ತಿ ಪಡೆಯಲು ನಿರ್ಧರಿಸಿರುವುದು ಅಚ್ಚರುಗೆ ಕಾರಣವಾಗಿದೆ. 1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು.
PublicNext
16/09/2021 02:41 pm