ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಷಿ ಕಾನೂನು ತಡೆಹಿಡಿಯಲಾಗಿದೆ, ನೀವು ಯಾವುದರ ವಿರುದ್ಧ ಹೋರಾಡುತ್ತಿದ್ದೀರಿ?": ಸುಪ್ರೀಂ ಗರಂ

ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾನೂನುಗಳನ್ನು ತಡೆಹಿಡಿಯಲಾಗಿದೆ. ಹಾಗಿದ್ದರೂ ನೀವು ಈಗ ಯಾವುದರ ವಿರುದ್ಧ ಹೋರಾಡುತ್ತಿದ್ದೀರಿ? ಶಾಸನಗಳೇ ಚಾಲ್ತಿಯಲ್ಲಿ ಇಲ್ಲದಿರುವಾಗ ನೀವು ಯಾವುದನ್ನು ವಿರೋಧಿಸುತ್ತಿದ್ದೀರಿ?ಎಂದು ರೈತ ಸಂಘಟನೆಗಳನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.

ನ್ಯಾಯಮೂರ್ತಿಗಳಾದ ಎ.ಎಂ ಖಾನ್ವಿಲ್ಕರ್ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಕೃಷಿ ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ ಮೇಲೂ ಪ್ರತಿಭಟನೆ ನಡೆಸುವ ಪ್ರಶ್ನೆಯಿದೆಯಾ ಎಂದು ಹೇಳಿದರು. ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರವನ್ನು ಉಲ್ಲೇಖಿಸಿದ್ದು ಅಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಪೀಠ ಹೇಳಿತು.

Edited By : Nagaraj Tulugeri
PublicNext

PublicNext

04/10/2021 03:38 pm

Cinque Terre

56.57 K

Cinque Terre

8